ಉಡುಪಿ: ಛಂದೋಬದ್ಧ ಯಕ್ಷಕವಿ, ಹವ್ಯಾಸಿ ಯಕ್ಷಗಾನ ಕಲಾವಿದ, ಲೇಖಕರಾಗಿ ಗುರುತಿಸಿಕೊಂಡಿರುವ ಉಡುಪಿಯ ಪೂರ್ಣಪ್ರಜ್ಞಾ ಕಾಲೇಜಿನ ಕನ್ನಡ ಉಪನ್ಯಾಸಕರಾದ ಶಿವಕುಮಾರ ಅಳಗೊಡು ಇವರು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಮೂಲಕ ಸಲ್ಲಿಸಿದ ‘ಯಕ್ಷಗಾನ ಪೂರ್ವರಂಗ ಅಧ್ಯಯನ’ ಸಂಶೋಧನ ಮಹಾ ಪ್ರಬಂಧಕ್ಕೆ ಹಂಪಿಯ ಕನ್ನಡ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ನೀಡಿದೆ. ಇವರು ಶಿವಮೊಗ್ಗ ಜಿಲ್ಲೆಯ, ಹೊಸನಗರ ತಾಲ್ಲೂಕಿನ ನಿಟ್ಟೂರು ಸಮೀಪದ ಅಳಗೊಡು ಗೀತಾ ಅನಂತಮೂರ್ತಿಯವರ ಪುತ್ರರಾಗಿರುತ್ತಾರೆ.
