ಉಡುಪಿ: ಅಂಬಲಪಾಡಿ ಶ್ರೀ ಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾ ಮಂಡಳಿಯ 66ನೇ ವಾರ್ಷಿಕೋತ್ಸವ ಫೆ.3ರಂದು ಸಂಜೆ 6 ಗಂಟೆಗೆ ಕಂಬಕಟ್ಟದ ಶ್ರೀ ಜನಾರ್ದನ ಮಂಟಪದಲ್ಲಿ ನಡೆಯಲಿದ್ದು, ಪ್ರತಿವರ್ಷದಂತೆ ಮೂವರು ಸಾಧಕ ಕಲಾವಿದರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಕಿದಿಯೂರು ಜನಾರ್ದನ ಆಚಾರ್ಯ ಸ್ಮರಣಾರ್ಥ ಪ್ರಶಸ್ತಿಯನ್ನು ಹಿರಿಯ ಚೆಂಡೆ ವಾದಕ ರಾಮಕೃಷ್ಣ ಮಂದಾರ್ತಿ, ಕಪ್ಪೆಟ್ಟು ಬಾಬು ಶೆಟ್ಟಿಗಾರ್ ಸ್ಮರಣಾರ್ಥ ಪ್ರಶಸ್ತಿಯನ್ನು ಹಿರಿಯ ಪ್ರಸಾದನ ತಜ್ಞ ಕೃಷ್ಣಸ್ವಾಮಿ ಜೋಯಿಸ್ ಬ್ರಹ್ಮಾವರ ಹಾಗೂ ಕುತ್ಪಾಡಿ ಆನಂದ ಗಾಣಿಗ ಸ್ಮರಣಾರ್ಥ ಪ್ರಶಸ್ತಿಯನ್ನು ಹಿರಿಯ ಹಾಸ್ಯ ಕಲಾವಿದ ನಾಗಪ್ಪ ಹೊಳೆಮೊಗೆ ಅವರಿಗೆ ನೀಡಲಾಗುತ್ತಿದೆ
ಧರ್ಮದರ್ಶಿ ಡಾ.ನಿ.ಬೀ. ವಿಜಯ ಬಲ್ಲಾಳ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಅಧ್ಯಕ್ಷ ಕೆ.ಅಜಿತ್‌ಕುಮಾರ್ ಮತ್ತು ಕಾರ್ಯದರ್ಶಿ ಪ್ರಕಾಶ್ ಹೆಬ್ಬಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.