Written by 11:58 am News

ಯಕ್ಷಗಾನ ಅಂಚೆ ಚೀಟಿ ಬಿಡುಗಡೆ

ಮಂಗಳೂರು: ಕರಾವಳಿಯ ಸಾಂಪ್ರದಾಯಿಕ ಕಲೆ ಯಕ್ಷಗಾನವನ್ನು ವಿಶ್ವದಾದ್ಯಂತ ಪರಿಚಯಿಸುವ ನಿಟ್ಟಿನಲ್ಲಿ ಭಾರತೀಯ ಅಂಚೆ ಇಲಾಖೆಯು ಅಂಚೆ ಚೀಟಿ ಬಿಡುಗಡೆಗೊಳಿಸಿದೆ. ಅಂಚೆ ಇಲಾಖೆಯು ಎಂ ಆರ್ಪಿಎಲ್ ಪ್ರಾಯೋಜಕತ್ವದಲ್ಲಿ ಹೊರತಂದಿರುವ ಯಕ್ಷಗಾನಕ್ಕೆ ಸಮರ್ಪಿತ ಸಂಸ್ಮರಣ ಅಂಚೆ ಚೀಟಿಯನ್ನು ರವಿವಾರ ಮಂಗಳೂರು ಪುರಭವನದಲ್ಲಿ ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಶಾಸಕ ಡಿ. ವೇದವ್ಯಾಸ ಕಾಮತ್, ಡಾ. ಎಂ. ಪ್ರಭಾಕರ ಜೋಶಿ, ಯಕ್ಷಧ್ರುವ ಪಟ್ಲ ಪೌಂಡೇಶನ್ ನ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಮುಂತಾದವರು ಅತಿಥಿಗಳಾಗಿ ಭಾಗವಹಿಸಿದ್ದರು.

Visited 21 times, 1 visit(s) today
Close Search Window
Close